
*ಹೊಯ್ಸಳ ವಿಜಯ ಬೆಂಗಳೂರು*
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಡಿತರ ವಿತರಕರಿಗೆ ಸರ್ಕಾರದ ಆಹಾರ ಇಲಾಖೆ ಆಯುಕ್ತರ ಕಚೇರಿಯಿಂದ ನೇರವಾಗಿ ಕಮಿಷನ್ ಹಣವನ್ನು ಜಮಾ ಮಾಡುವಂತೆ ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಹಾಗೂ ರಾಷ್ಟ್ರೀಯ ಕಾರ್ಯಾಧ್ಯಕ್ಷ ಕೃಷ್ಣಪ್ಪ ಸರ್ಕಾರದ ಅಧೀನ ಕಾರ್ಯದರ್ಶಿಗಳು ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿಗಳು ಮತ್ತು ಆಹಾರ ಇಲಾಖೆಯ ಆಯುಕ್ತರನ್ನು ಭೇಟಿ ಮಾಡಿ ಮನವಿ ನೀಡಿದರು.
ಉದಯವಾಹಿನಿಯೊಂದಿಗೆ ಮಾತನಾಡಿದ ಕೃಷ್ಣಪ್ಪ ರಾಜ್ಯದಲ್ಲಿ ಹಲವಾರು ಜಿಲ್ಲೆಗಳ ಆಹಾರ ಇಲಾಖೆ ಉಪದೇಶಕರು ಮತ್ತು ಜಂಟಿ ನಿರ್ದೇಶಕರು ಪಡಿತರ ವಿತರಕರ ಖಾತೆಗೆ ಕಮಿಷನ್ ಹಣ ಜಮಾ ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಆದ್ದರಿಂದ ಇಂದು ಅಧಿಕಾರಿಗಳಿಗೆ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಇದಕ್ಕೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂದರು.
ಈ ತಿಂಗಳು ಪಡಿತರ ಎದ್ದು ಬಳಿ ವಿಳಂಬವಾಗಿದ್ದು ಕೂಡಲೆ ಸರ್ಕಾರಿ ಆಹಾರ ಇಲಾಖೆ ಸಗಟು ಮಳಿಗೆಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಬೇಕು ರಾಗಿ ವಿತರಣೆಗೆ ಬರುವ ತಿಂಗಳಿಂದ ಅವಕಾಶ ಕಲ್ಪಿಸಬೇಕು ಎಂದು ಸಹ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದರು
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಪಡಿತರ ವಿತರಕರು ತಮ್ಮ ಬ್ಯಾಂಕ್ ಖಾತೆಯ ಸಂಖ್ಯೆಗಳನ್ನು ಸರಿಯಾಗಿ ನೀಡದೆ ಇರುವುದು ಕಮಿಷನ್ ಹಣ ಜಮಾ ಆಗುವಲ್ಲಿ ವಿಳಂಬವಾಗಿದೆ ಆದ್ದರಿಂದ ನ್ಯಾಯ ಬೆಲೆ ಅಂಗಡಿ ಮಾಲೀಕರು ತಮ್ಮ ತಮ್ಮ ಬ್ಯಾಂಕ್ ಖಾತೆಗಳನ್ನು ಸರಿಯಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಈ ವ್ಯವಸ್ಥೆ ಸರಿಯಾದಲ್ಲಿ ಬರುವ ದಿನಗಳಲ್ಲಿ ರಾಜ್ಯ ಸರ್ಕಾರದ ಆಹಾರ ಇಲಾಖೆಯ ಆಯುಕ್ತರ ಕಚೇರಿಯಿಂದಲೇ ನೇರವಾಗಿ ಕಮಿಷನ್ ಹಣ ಜಮಾ ಆಗುವಂತೆ ಈಗಾಗಲೇ ಸಂಬಂಧಪಟ್ಟ ಆಹಾರ ಇಲಾಖೆ ಉನ್ನತ ಅಧಿಕಾರಿಗಳು ಮತ್ತು ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಕಾರ್ಯ ಅಧ್ಯಕ್ಷ ಕೃಷ್ಣಪ್ಪ ಉದಯವಾಹಿನಿಗೆ ತಿಳಿಸಿದ್ದಾರೆ