ಹೊಯ್ಸಳ ವಿಜಯ ಅರಸೀಕೆರೆ
ಅರಸೀಕೆರೆ : ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಚಿಹ್ನೆಯಿಂದ ಗೆದ್ದಂತಹ ಕೆಲವು ಸದಸ್ಯರುಗಳು ಪಕ್ಷದ ವಿರುದ್ಧ ಮತ ಚಲಾವಣೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಲಿಂಗೇಶ್ ಹಾಗೂ ಅಧ್ಯಕ್ಷರ ಚುನಾವಣೆಯಲ್ಲಿ ಪರಾಜಿತಗೊಂಡ ಸುಜಾತ ರಮೇಶ್ ದೂರು ಸಲ್ಲಿಸಿದ್ದರು ಈ ವಿಷಯವಾಗಿ ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಎಂ ಸಮಿವುಲ್ಲಾ ಹಾಗೂ ಇತರ ಸದಸ್ಯರ ವಿರುದ್ಧ ಹಾಕಿದ್ದ ಅರ್ಜಿಯನ್ನು ಜಿಲ್ಲಾಧಿಕಾರಿಗಳು ವಜಾ ಮಾಡಿದ ಕಾರಣ ನಗರಸಭೆ ಮುಂಭಾಗದಲ್ಲಿ ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಿಹಿ ಹಂಚಿಕೆ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರು
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಎಂ ಸಮಿವುಲ್ಲಾ ಮಾತನಾಡಿ ನಮ್ಮ ವಿರುದ್ಧ ವಿರೋಧಿಗಳು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿ ಇಂದು ವಜಾ ಆದ ಕಾರಣ ಸತ್ಯಕ್ಕೆ ಜಯವಾಗಿದೆ ಮುಂದಿನ ದಿನಗಳಲ್ಲಿ ಅರಸೀಕೆರೆ ನಗರಸಭೆ ವತಿಯಿಂದ ಅಭಿವೃದ್ಧಿಪಡಿಸಲು ಸಹಕಾರಿ ಯಾಗಲಿದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷರಾದ ಮನೋಹರ್ ನಗರಸಭೆ ಸದಸ್ಯರುಗಳು ಉಪಸ್ಥಿತಿ ಇದ್ದರು.