
ಹೊಯ್ಸಳ ವಿಜಯ ಚಿಕ್ಕಮಂಗಳೂರು
ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ವಕೀಲರ ಸಂಘ, ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಶ್ರೀಮತಿ ಸುಂದರಮ್ಮ ಶಂಕರಮೂರ್ತಿ ಸಭಾಂಗಣ, ಮಲೆನಾಡು ವಿದ್ಯಾ ಸಂಸ್ಥೆ , ಚಿಕ್ಕಮಗಳೂರು ಇಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಸದಸ್ಯ ಕಾರ್ಯದರ್ಶಿಗಳು , ಉಪ ಕಾರ್ಯದರ್ಶಿ ಗಳು, ಜಿಲ್ಲಾ ಪಂಚಾಯತ್, ಉಪ ಪೊಲೀಸ್ ವರಿಷ್ಠಾಧಿಕಾರಿಗಳು, ಅಧ್ಯಕ್ಷರು, ಮಕ್ಕಳ ಕಲ್ಯಾಣ ಸಮಿತಿ, ಮಾನ್ಯ ಸಹಾಯಕ ಕಾರ್ಮಿಕ ಆಯುಕ್ತರು, ಮಾನ್ಯ ಕಾರ್ಮಿಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಮಿಕ ಸಂಘಗಳ ಪದಾಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರುಗಳಯ ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. 🙏🙏🏼