
*ಹೊಯ್ಸಳ ವಿಜಯ ಅರಸೀಕೆರೆ*
ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿರುವ ಏಕೈಕ ಶಾಸಕ ಕೆಎಂ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಬೇಕೆಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮೇಗೌಡ ಮತ್ತು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಶಂಕರ್ ಒತ್ತಾಯಿಸಿದರು
ಇತ್ತೀಚಿಗೆ ಮಾತನಾಡಿದ ಅವರು ಕೆಎಂ ಶಿವಲಿಂಗೇಗೌಡರು ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷ ಸೇರುವಾಗ ನಿಮಗೆ ಸಚಿವ ಸ್ಥಾನ ನೀಡುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಪಕ್ಷಕ್ಕೆ ಸೇರಿಸಿಕೊಂಡರು ಹಾಸನ ಜಿಲ್ಲೆಯ ರಾಜಕಾರಣದಲ್ಲಿ ಜೆಡಿಎಸ್ ಪಕ್ಷಕ್ಕೆ ಪ್ರಬಲ ವಿರೋಧವನ್ನು ಒಡ್ಡಿ ಕಾಂಗ್ರೆಸ್ ಪಕ್ಷದಿಂದ ಶಿವಲಿಂಗೇಗೌಡರು ಏಕೈಕ ಶಾಸಕರಾಗಿ ಚುನಾಯಿತರಾದರು
ಅಭಿವೃದ್ಧಿ ಕೆಲಸಗಳಲ್ಲಿ ಚಾಕು ಚಕ್ಕೆತೆಯಿಂದ ಸರ್ಕಾರದ ಮಟ್ಟದಲ್ಲಿ ಕೆಲಸ ಕಾರ್ಯಗಳನ್ನು ತಂದು ಅರಸೀಕೆರೆ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ತೋರಿಸಿಕೊಟ್ಟಿದ್ದಾರೆ ಇವರಿಗೆ ಸಚಿವ ಸ್ಥಾನವನ್ನು ನೀಡಿದ್ದೆ ಆದಲ್ಲಿ ಮುಂದಿನ ದಿನಗಳ ಚುನಾವಣೆಯಲ್ಲಿ ಇಡೀ ಹಾಸನ ಜಿಲ್ಲೆಯಾದ್ಯಂತ ಏಳಕ್ಕೆ ಏಳು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದು ಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ ಹೀಗಾಗಿ ಕಾಂಗ್ರೆಸ್ ಪಕ್ಷ ಕೂಡಲೇ ಕೆಎಂ ಶಿವಲಿಂಗೇಗೌಡರಿಗೆ ಸಚಿವ ಸ್ಥಾನವನ್ನು ನೀಡಿ ಹಾಸನ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಹಕರಿಸಬೇಕೆಂದು ಇತ್ತೀಚಿಗೆ ತಿಳಿಸಿದರು ಹಾಸನದ ಉದ್ಯಮಿಗಳಾದ ವೆಂಕಟೇಗೌಡ ಗ್ರಾಮ ಪಂಚಾಯಿತಿಯ ಸದಸ್ಯರಾದ ಶರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು