
ಚಿಕ್ಕಮಗಳೂರಿಗೆ ಅಮೃತ ಭಾರತ್ ರೈಲು ನಿಲ್ದಾಣ ಯೋಜನೆ…
ಕೇಂದ್ರ ಸಚಿವ ವಿ.ಸೋಮಣ್ಣರವರೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಶಿವನಿ, ಬೇಲೂರು ಹಾಗೂ ಅಜ್ಜಂಪುರ ರೈಲು ನಿಲ್ದಾಣಗಳಿಗೆ ಭೇಟಿ ಕೊಟ್ಟಿದ್ದೆವು. ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಪ್ರಮುಖ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಅನುಮೋದನೆ ಕೊಡುವುದಾಗಿ ಸಚಿವ ಶ್ರೀ ವಿ.ಸೋಮಣ್ಣ ಘೋಷಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದ ಅಮೃತ ಭಾರತ ಯೋಜನೆಯಡಿ ಶಿವಾನಿ ಮತ್ತು ಅಜ್ಜಂಪುರ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವುದಾಗಿ ಸಚಿವರು ಘೋಷಿಸಿದರು. ಇದೇ ಸಂದರ್ಭದಲ್ಲಿ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ರೈಲ್ವೆ ಅಧಿಕಾರಿಗಳಿಗೆ ಸಚಿವರು ಸ್ಥಳದಲ್ಲೇ ಸೂಚನೆ ಕೊಟ್ಟರು. ಈ ಭಾಗದ ಬಹಳ ದಿವಸಗಳ ಬೇಡಿಕೆಗಳು ಈಡೇರುವ ಭರವಸೆ ಹೊಂದಿದ್ದೇನೆ. ನಮ್ಮೆಲ್ಲಾ ಬೇಡಿಕೆಗಳಿಗೆ ಅನುಗುಣವಾಗಿ ಸ್ಪಂದಿಸುತ್ತಿರುವ ಗೌರವಾನ್ವಿತ ಸಚಿವರಿಗೆ ಧನ್ಯವಾದಗಳು.