September 11, 2025
IMG-20250528-WA0027

*ಹೊಯ್ಸಳ ವಿಜಯ*

ಅರಸೀಕೆರೆ:ನಗರದ ಹೊರವಲಯ ಹೊಸಹಳ್ಳಿ ಗೇಟ್ ಹತ್ತಿರ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ನೇ ಸಾಲಿನ ಕಾಲೇಜಿನ ಎಲ್ಲಾ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕವಿತಾ. ಕೆ. ಜಿ ಅವರು ಕಾಲೇಜು ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಆಕರ್ಷಣೆಗೆ ಒಳಗಾಗಿ ದುಡಿಕಿ ತೆಗೆದುಕೊಳ್ಳುವ ನಿರ್ಧಾರಗಳು ಬದುಕಿನ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರುತ್ತವೆ. ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮತ್ತು ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ವಿಜಯಲಕ್ಷ್ಮಿ ದೇಶಮಾನ ಅವರಂತಹ ಸಾಧಕರನ್ನು ಪ್ರೇರಣೆಯಾಗಿಸಿಕೊಂಡಾಗ ಸಮಸ್ಯೆಗಳನ್ನು ಮೆಟ್ಟಿನಿಂತು ಗುರಿ ಮುಟ್ಟಲು ಸಾಧ್ಯ, ಸಹಪಠ್ಯ ಚಟುವಟಿಕೆಗಳು ಸರ್ವಾಂಗೀಣ ಪ್ರಗತಿಗೆ ಪೂರಕ ಎಂದು ಅಭಿಪ್ರಾಯ ಪಟ್ಟರು.

ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಉಷಾ ಎಚ್. ಪಿ. ಅವರು 2024 -25 ನೇ ಸಾಲಿನ ಕಾಲೇಜು ಎನ್ಎಸ್ಎಸ್, ರೇಂಜರ್ಸ್ ಮತ್ತು ರೋವರ್ಸ,ರೆಡ್ ಕ್ರಾಸ್, ಕ್ರೀಡೆ, ಸಾಂಸ್ಕೃತಿಕವಾಗಿ ಆಯೋಜಿಸಿದ ಕಾರ್ಯಕ್ರಮ ಹಾಗೂ ಶೈಕ್ಷಣಿಕವಾಗಿ ಮಾಡಿದ ಸಾಧನೆಯ ವರದಿಯನ್ನು ಪ್ರಸ್ತುತಪಡಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಿದ್ದೇಶ್ ಜಾಜೂರು ಇವರು ಕಾಲೇಜಿನ ಬೆಳವಣಿಗೆಯಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಗೀತಾ ಅವರು 2023- 24ನೇ ಶೈಕ್ಷಣಿಕ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿಯೇ ಅತ್ಯುತ್ತಮ ಅಂಕಗಳನ್ನು ಗಳಿಸಿದ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ಬರಲು ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪರಿಶ್ರಮ ಪಡಬೇಕೆಂದು ಕರೆ ನೀಡಿದರು. ಜಾಜೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಲೀಲಾಬಾಯಿ ಚಂದ್ರಶೇಖರ್ ಅವರು ಸರ್ಕಾರಿ ಕಾಲೇಜುಗಳು ಉನ್ನತ ಮಟ್ಟಕ್ಕೆ ಬೆಳೆದಾಗ ಬಡವರ ಮಕ್ಕಳೂ ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು. ಕ್ರೀಡಾವಿಭಾಗದಲ್ಲಿ ಕ್ರಿಯಾಶೀಲವಾಗಿರುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭ ಕೋರಿದರು. ದೈಹಿಕ ಶಿಕ್ಷಣ ನಿರ್ದೇಶಕ ಹರೀಶ್ ಬಹುಮಾನ ವಿತರಣೆ ನಡೆಸಿಕೊಟ್ಟರು. ಪ್ರಾಧ್ಯಾಪಕರಾದ ಡಾ. ಎಸ್. ನಾರಾಯಣ ಅವರು ಎಲ್ಲರನ್ನೂ ಸ್ವಾಗತಿಸಿದರು, ಡಾ. ರಾಜೇಶ್ ಖನ್ನಾ ಎಲ್ಲರನ್ನೂ ವಂದಿಸಿದರು, ವಿದ್ಯಾರ್ಥಿಗಳಾದ ಕುಮಾರಿ ಕಲಾವತಿ, ಕುಮಾರಿ ಭಾವನ, ನಿರೂಪಣೆ ಮಾಡಿದರು. ಡಾ. ಭಾಸ್ಕರ್ ಅವರ ಮಾರ್ಗದರ್ಷನದಲ್ಲಿ ಕಾರ್ಯಕ್ರಮ ಉತ್ತಮವಾಗಿ ಮೂಡಿಬಂತು. ಡಾ. ಸುನಿಲ್ ಕುಮಾರ್, ಡಾ. ಹರೀಶ್ ಕುಮಾರ್, ಡಾ. ಶಿವಕುಮಾರ್ , ರಾಘವೇಂದ್ರ, ಹರೀಶ್, ಗಂಗಾ, ಮಮತಾ, ರವೀಶ್, ವಿಶ್ವನಾಥ್ ಸೇರಿದಂತೆ ಎಲ್ಲಾ ಸಿಬ್ಬದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 91640 32789, 951910209 ಉಮೇಶ್ ಬಾಣಾವರ ಸಂಪಾದಕರು