


ಅರಸೀಕೆರೆ : ನಗರದ ವಾಚನಾಲಯ ರಸ್ತೆಯಲ್ಲಿರುವ ವೆಂಕಟೇಶ್ವರ ಕಲಾ ಭವನದಲ್ಲಿ ಕರ್ನಾಟಕ ಸರ್ಕಾರ ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅರಸೀಕೆರೆ ಇವರುಗಳ ಸಂಯುಕ್ತಶ್ರಯದಲ್ಲಿ ಪ್ರಗತಿಪರ ಸಾಧನೆಗಳ ಸರದಾರ, ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಾದ ಸನ್ಮಾನ್ಯ ಶ್ರೀ ದೇವರಾಜ ಅರಸುರವರ 110 ನೇ ವರ್ಷದ ಜನ್ಮದಿನಾಚರಣೆ ಸಮಾರಂಭ ಏರ್ಪಡಿಸಲಾಗಿತ್ತು ಈ ಕಾರ್ಯಕ್ರಮವನ್ನು ಶಾಸಕ ಗೃಹ ಮಂಡಳಿಯ ಅಧ್ಯಕ್ಷ ಕೆ ಎಂ ಶಿವಲಿಂಗೇಗೌಡ ರವರು ಶ್ರೀ ದೇವರಾಜ ಅರಸು ರವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿ ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ದೇವರಾಜು ಅರಸು ರವರು ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು ಅವರ ಆಡಳಿತ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರಗಳು ಈಗಲೂ ಚಾಲ್ತಿಯಲ್ಲಿವೆ ಗೇಣಿ ಶಾಸನ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ ಎಂದರು 2024 -25 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸನ್ಮಾನ ಮಾಡಿದರು.
ದೇವರಾಜ ಅರಸುರವರ ಪ್ರಗತಿಪರ ಕಾರ್ಯಕ್ರಮಗಳು ಅವರ ಆಶಯಗಳನ್ನು ಸಮಾರಂಭದಲ್ಲಿ ನೆರೆದಿದ್ದ ಜನರಲ್ಲಿ ಬಿತ್ತರಿಸಲಾಯಿತು
ಈ ಸಂದರ್ಭದಲ್ಲಿ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಕುಮಾರ್, ಅರಸೀಕೆರೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಶ್ರೀಮತಿ ಯಶೋಧಮ್ಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀ ಯೋಗೀಶ್, ಅರಸೀಕೆರೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ ಟಿ ಜಯಣ್ಣ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.