
ಹಾಸನ ಆ.25(ಕರ್ನಾಟಕ ವಾರ್ತೆ): ಕೃಷಿ ಚಟುವಟಿಕೆಗೆ ತೊಂದರೆ ಆಗದಂತೆ ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಔಷಧಿಗಳನ್ನು ಒದಗಿಸಲು ಕ್ರಮವಹಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆ, ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಗಳಾದ ನವೀನ್ ರಾಜ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿAದು ಸಾಮಾನ್ಯ ಸಭೆ ನಡೆಸಿ ಮಾತನಾಡಿದ ಅವರು ಬೆಳೆ ಸಂರಕ್ಷಣೆಗೆ ಔಷಧಿ ಸಿಂಪರಣೆ ಕುರಿತು ರೈತರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿಗೆ ಯಾವುದೇ ಗ್ರಾಮಗಳಲ್ಲಿ ತೊಂದರೆ ಆಗದಂತೆ ನಿಗಾವಹಿಸಲು ಸೂಚನೆ ನೀಡಿದರು.
ಭೂಕುಸಿತ ಸಂಭವಿಸಿ ರಸ್ತೆ ತಡೆಯಾಗಿ ಸಂಚಾರಕ್ಕೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಾನುವಾರುಗಳು ಆಕಸ್ಮಿಕವಾಗಿ ಸಾವನ್ನಪ್ಪಿದರೆ ಪರಿಹಾರ ಪಡೆಯುವ ನಿಟ್ಟಿನಲ್ಲಿ ವಿಮೆ ಮಾಡಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ,ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ಉಪಸ್ಥಿತರಿದ್ದರು.
*********-