

ಸಂಪ್ರದಾಯದ ಹೆಸರಿನಲ್ಲಿ ದೈವಿಕತೆಯ ಹೆಸರಿನಲ್ಲಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಮೌಡ್ಯಾಚರಣೆಯನ್ನು ನಡೆಸಿಕೊಂಡು ಬರುತ್ತಿದ್ದು ಇದು ಹೆಣ್ಣು ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಜಿಕೆ ತಿಳಿಸಿದ್ದಾರೆ.
ಅರಸೀಕೆರೆ ತಾಲೂಕಿನ ಕಣೆಕಟ್ಟೆ ಹೋಬಳಿಯ ಗೋಪಾಲಪುರ ಗ್ರಾಮ ಕೆ ಗೊಲ್ಲರಹಟ್ಟಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಪೋಲಿಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ, ಭೇಟಿ ಬಚಾವೋ ಬೇಟಿ ಪಡಾವೋ ಮತ್ತು ಮೌಡ್ಯಾಚರಣೆ ನಿಷೇಧ ಕಾಯ್ದೆ, ಹಾಗೂಸಾಮಾಜಿಕ ನ್ಯಾಯ ದಿನದ ಕುರಿತಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಹೆಣ್ಣು ಮಕ್ಕಳು ವಿದ್ಯಾವಂತರಾಗುವ ಮೂಲಕ ಸಮಾಜದ ಮೌಡ್ಯತೆಗಳನ್ನು ಮೆಟ್ಟಿ ನಿಲ್ಲಬೇಕಿದೆ ಈ ನಿಟ್ಟಿನಲ್ಲಿ ಸರ್ಕಾರವು ಸಾಮಾಜಿಕ ಬಹಿಷ್ಕಾರ, ಮೌಡ್ಯಾಚರಣೆಯ ನಿಷೇಧದಂತಹ ಕಾಯ್ದೆಗಳನ್ನು ಜಾರಿಗೆ ತಂದಿದ್ದರು ಗ್ರಾಮೀಣ ಭಾಗದಲ್ಲಿ ಅದರಲ್ಲಿಯೂ ಗೊಲ್ಲ ಸಮುದಾಯದಲ್ಲಿ ಇನ್ನೂ ಸಹ ಇಂತಹ ಆಚರಣೆಗಳು ನಡೆಯುತ್ತಿರುವುದು ವಿಷಾದನೀಯ ಎಂದರು.
ಸರ್ಕಾರವು ಹೆಣ್ಣು ಮಕ್ಕಳ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರು ಅದನ್ನು ಕಟ್ಟುನಿಟ್ಟಾಗಿ ಪರಿಣಾಮಕಾರಿಯಾಗಿ ಆಚರಣೆಗೆ ತರಲು ಇನ್ನು ಸಾಧ್ಯವಾಗಿಲ್ಲ ಸಂಪ್ರದಾಯದ ಹೆಸರಿನಲ್ಲಿ ನಡೆಯುತ್ತಿರುವ ಮೂಢನಂಬಿಕೆಗಳ ಆಚರಣೆಯು ಕೇವಲ ಒಂದು ದಿನದಲ್ಲಿ ಬಗೆಹರಿಯುವ ಸಮಸ್ಯೆ ಅಲ್ಲ ಎಂಬುದಾಗಿ ತಿಳಿಸಿದರು.
ಹೆಣ್ಣು ಮಕ್ಕಳು ಶಿಕ್ಷಿತರಾದಂತೆ ಪುರುಷ ಪ್ರಧಾನ ಸಮಾಜದ ವಿರುದ್ಧ ಅಸಂಪ್ರಾಯದಾಯಿಕ ಆಚರಣೆಗಳ ವಿರುದ್ಧ, ಮೂಢನಂಬಿಕೆಗಳ ವಿರುದ್ಧ ಹೋರಾಡಲು ಬಲಬಂದAತಾಗುತ್ತದೆ, ಋತುಚಕ್ರ ಸಮಯದಲ್ಲಿ, ಬಾಣಂತನದ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಊರ ಹೊರಗೆ ಇಡುವಂತದ್ದು ಒತ್ತಾಯಿಸುವಂಥದ್ದು ಕಾನೂನುಬಾಹಿರ ಹೆಣ್ಣು ಮಕ್ಕಳ ಮೇಲೆ ದೇವರು, ಧರ್ಮ, ಸಂಪ್ರದಾಯ ಹಾಗೂ ವೈಯಕ್ತಿಕ ಹೆಸರಿನಲ್ಲಿ ದೌರ್ಜನ್ಯ ಸಲ್ಲದು ಇಂತಹ ಅನಿಷ್ಠ ಪದ್ಧತಿಗಳಿಗೆ ಪ್ರೋತ್ಸಾಹ ನೀಡಿದವರು ಸಹ ಕಾನೂನು ರೀತಿಯ ಶಿಕ್ಷೆಗೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದರು. ಹೆಣ್ಣು ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುವ ಮೂಲಕ ಸಂರಕ್ಷಣೆ ಮಾಡಬೇಕು ಎಂದು ಬಲವಾಗಿ ಒತ್ತಾಯಿಸಿದರು.
ಅರಸೀಕೆರೆ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಕುಮಾರ್ ಡಿ. ವಡಿಗೇರಿ ಅವರು ಮಾತನಾಡಿ ಸರ್ಕಾರಗಳು ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಸ್ವಾವಲಂಬನೆಗಾಗಿ ಹಲವು ಯೋಜನೆ ಮತ್ತು ವಿಶೇಷ ಕಾಯ್ದೆಗಳನ್ನು ಜಾರಿಗೆ ತಂದಿದ್ದರು ಸಹ ಅವು ಸರಿಯಾದ ಕ್ರಮದಲ್ಲಿ ಜಾರಿಯಾಗುತ್ತಿಲ್ಲ ಹೆಣ್ಣುಮಕ್ಕಳ ಮಾನಸಿಕ, ದೈಹಿಕವಾಗಿ ಹಾಗೂ ಭವಿಷ್ಯಕ್ಕೆ ಅಡ್ಡಿ ಉಂಟು ಮಾಡುತ್ತದೆ ಸಂಪ್ರದಾಯದ ಹೆಸರಿನಲ್ಲಿ ಮೌಡ್ಯತೆಯು ಸರಿಯಾದ ಕ್ರಮವಾಗಿಲ್ಲ ಎಲ್ಲರೂ ಕೂಡ ಸುಶಿಕ್ಷಕಿತರಾದಲ್ಲಿ ಇಂತಹ ಸಮಸ್ಯೆಗಳನ್ನು ಬೇರು ಸಮೇತ ಕಿತ್ತೊಗೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಅರಸೀಕೆರೆ ತಹಸಿಲ್ದಾರ್ ಸಂತೋಷ್ ಕುಮಾರ್ ಮಾತನಾಡಿ ಮೌಡ್ಯತೆಯ ಹಲವು ಬಾರಿ ಜಿಲ್ಲಾಡಳಿತ ತಾಲೂಕು ಆಡಳಿತದ ವತಿಯಿಂದ ಕೆ. ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ಮಾಡಿ ಹಲವಾರು ಜಾಗೃತಿ ಅರಿವು ಮೂಡಿಸಿದಾಗ್ಯೂ ಹೆಣ್ಣು ಮಕ್ಕಳ ಮೇಲೆ ಮೌಡ್ಯಾಚರಣೆಯು ನಡೆಯುತ್ತಿರುವುದು ಅಕ್ಷಮ್ಯ ಎಂದು ತಿಳಿಸಿದರು.
ತಾಲೂಕು ಆರೋಗ್ಯ ಅಧಿಕಾರಿಯಾದ ಡಾ. ಮಂಜುಳಾ ಕಾರ್ಯಕ್ರಮದಲ್ಲಿ ಬಾಣಾವರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಸುರೇಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್ ಪರಶಿವಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಯೋಗೀಶ್, ಹಿಂದುಳಿದ ವರ್ಗಗಳ ವಸತಿ ಶಾಲೆಗಳ ವಿಸ್ತರಣಾಧಿಕಾರಿ ಯಶೋಧ, ಹಾಸನ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿ ರೂಪವತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
**********-
